ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ 2022ರ ಪ್ರಕಾರ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ ಮತ್ತು ವಯಸ್ಕ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ ರಚನೆ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಶಿಕ್ಷಣ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಹೆಚ್ಚಿನ ಒತ್ತು ನೀಡಲಾಗಿದ್ದು, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ದಿಗೆ ಇದೇ ಮೊದಲಬಾರಿಗೆ 500 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದರು.
ಆಯ್ದ ಪ್ರೌಢ ಶಾಲೆಗಳನ್ನು ಪಿಯು ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು. ರಾಜ್ಯಾದ್ಯಂತ ಡಿಜಿಟಲ್ ಗ್ರಂಥಾಲಯ ಸ್ಥಾಪನೆ, ಪ್ರತಿ ವರ್ಷ ಶಿಕ್ಷಕರಿಗೆ ಪುಲೆ ಪ್ರಶಸ್ತಿ, 15 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಘೋಷಿಸಿದರು.
BIG NEWS: ಈ ವರ್ಷ ತೆರಿಗೆ ಹೆಚ್ಚಳವಿಲ್ಲ; ಸಿಎಂ ಘೋಷಣೆ
ರಾಜ್ಯದ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಕರ್ನಾಟಕ ತಂತ್ರಜ್ಞಾನ ಸಂಸ್ಥೆ ಗಳನ್ನಾಗಿ ಉನ್ನತೀಕರಣ ಮಾಡಲು ವಿದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆಯಲ್ಲಿ ವಿನೂತನ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗುವುದು ಎಂದು ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ.