ಶಿವಮೊಗ್ಗ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು, ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಧ್ವಜ ಸ್ತಂಭದಲ್ಲಿ ಕೇಸರಿ ಬಾವುಟ ಹಾರಿಸಿದ್ದ ವಿದ್ಯಾರ್ಥಿಗಳು ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಇದರ ಬೆನ್ನಲ್ಲೇ ಕಾಲೇಜಿನಲ್ಲಿ ಕಲ್ಲು ತೂರಾಟ ಘಟನೆಗಳು ನಡೆದಿದ್ದು, ನಗರದ ಪ್ರಮುಖ ರಸ್ತೆಗಳನ್ನು ಬಂದ್ ಮಾಡಿ ವಿದ್ಯಾರ್ಥಿಗಳು ಪ್ರತಿಭಟನೆ ತೀವ್ರಗೊಳಿಸಿದ್ದರು.
ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದಂತೆ ಪೊಲೀಸರು ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಶಾಂತಿ ಕಾಪಾಡಲು ಯತ್ನಿಸಿದ್ದಾರೆ.
ಜಿಲ್ಲೆಯಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಭುಗಿಲೆದ್ದ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ತಹಶೀಲ್ದಾರ್ ನಾಗರಾಜ್ ಶಿವಮೊಗ್ಗದಲ್ಲಿ 2 ದಿನಗಳ ಕಾಲ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.