ಬೆಂಗಳೂರು: ಸೆ.13ರಂದು ನಿಗದಿಯಾಗಿದ್ದ ಶಿವಮೊಗ್ಗ ಪಾಲಿಕೆ ಚುನಾವಣೆಗೆ ಹೈಕೋರ್ಟ್ ತಡೆ ನೀಡಿದೆ.
ಮೇಯರ್ ಸ್ಥಾನ ಎಸ್ ಟಿಗೆ ದೊರೆತಿಲ್ಲ ಎಂದು ಪಾಲಿಕೆ ಸದಸ್ಯ ನಾಗರಾಜ್ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನಾಗರಾಜ್ ಮನವಿ ಪುರಸ್ಕರಿಸಿ ಇದೀಗ ಶಿವಮೊಗ್ಗ ಪಾಲಿಕೆ ಚುನಾವಣೆಗೆ ತಡೆ ನೀಡಿ ಆದೇಶ ಹೊರಡಿಸಿದೆ.
ಮೇಯರ್ ಸ್ಥಾನ ಹಿಂದುಳಿದ ವರ್ಗ (ಎ)ಗೆ ಮೀಸಲಾಗಿತ್ತು. ಉಪಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು.