alex Certify BIG BREAKING: ಸಂಜೆ 5 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ; ಇಂದೇ ನೂತನ ಸಿಎಂ ಆಯ್ಕೆ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸಂಜೆ 5 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ; ಇಂದೇ ನೂತನ ಸಿಎಂ ಆಯ್ಕೆ…?

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಆಯ್ಕೆ ನಿಟ್ಟಿನಲ್ಲಿ ಇಂದು ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಭೆಯಲ್ಲಿ ನೂತನ ಸಿಎಂ ಹೆಸರು ಅಂತಿಮಗೊಳಿಸುವ ಸಾಧ್ಯತೆ ಇದೆ.

ನೂತನ ಸಿಎಂ ಆಯ್ಕೆ ವಿಚಾರವಾಗಿ ದೆಹಲಿಯಿಂದ ಬಿಜೆಪಿ ವೀಕ್ಷಕರ ತಂಡ ರಾಜ್ಯಕ್ಕೆ ಆಗಮಿಸುತ್ತಿದ್ದು, ಕಿಶನ್ ರೆಡ್ಡಿ ವೀಕ್ಷಕರಾಗಿ ಬರುತ್ತಿದ್ದಾರೆ ಎನ್ನಲಾಗಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ ನೇತೃತ್ವದ ವೀಕ್ಷಕರ ತಂಡ ನೂತನ ಸಿಎಂ ಆಯ್ಕೆ ಹೆಸರನ್ನು ಪ್ರಸ್ತಾಪಿಸಲಿದೆ. ಈ ನಿಟ್ಟಿನಲ್ಲಿ ಇಂದು ಸಂಜೆ 5 ಗಂಟೆಗೆ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಭೆಯಲ್ಲಿ ನೂತನ ಸಿಎಂ ಹೆಸರು ಅಂತಿಮಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಏನಿದು ಏಂಜೆಲ್ ಶಾಟ್‌…? ವೈರಲ್ ಆಯ್ತು ಬಾರ್‌ ಟೆಂಡರ್‌‌ ವಿವರಣೆ

ಈಗಾಗಲೆ ಶಾಸಕಾಂಗ ಪಕ್ಷದ ಸಭೆ ಬಗ್ಗೆ ಬಿಜೆಪಿ ಶಾಸಕರಿಗೂ ಮಾಹಿತಿ ರವಾನಿಸಲಾಗಿದ್ದು, ಇಂದು ನಡೆಯಲಿರುವ ಸಭೆಯಲ್ಲಿಯೇ ನೂತನ ಸಿಎಂ ಆಯ್ಕೆ ಬಹುತೇಕ ಖಚಿತವಾಗಲಿದ್ದು, ಒಂದೆರಡು ದಿನಗಳಲ್ಲಿ ಪದಗ್ರಹಣದ ಬಗ್ಗೆಯೂ ನಿರ್ಧಾರ ಕೈಗೊಳ್ಳುವ ಸಾಧ್ಯತೆ ದಟ್ಟವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...