ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನಿವಾಸದ ಎದುರು ಹನುಮಾನ್ ಚಾಲೀಸಾ ಪಠಿಸುವುದಾಗಿ ಹೇಳಿಕೆ ನೀಡಿ ವಿವಾದಕ್ಕೀಡಾಗಿ ಬಂಧಿಸಲ್ಪಟ್ಟಿದ್ದ ಸಂಸದೆ ನವನೀತ್ ರಾಣಾ ಹಾಗೂ ಶಾಸಕ ರವಿ ರಾಣಾ ದಂಪತಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಉದ್ಧವ್ ಠಾಕ್ರೆ ನಿವಾಸದ ಎದುರು ಹನುಮಾನ್ ಚಾಲೀಸ ಪಠಿಸುವುದಾಗಿ ಹೇಳಿ ಕೋಮು ಗಲಭೆಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ನವನೀತ್ ರಾಣಾ ಹಾಗೂ ರವಿ ರಾಣಾ ವಿರುದ್ಧ ಕೋಮುಗಲಭೆಗೆ ಪ್ರಚೋದನೆ ಹಾಗೂ ದೇಶದ್ರೋಹದ ಕೇಸ್ ದಾಖಲಾಗಿತ್ತು. ಇದರ ಬೆನ್ನಲ್ಲೇ ದಂಪತಿಯನ್ನು ಬಂಧಿಸಲಾಗಿತ್ತು.
ಇದೀಗ ಮುಂಬೈ ವಿಶೇಷ ನ್ಯಾಯಾಲಯ ನವನೀತ್ ರಾಣಾ ಹಾಗೂ ರವಿ ರಾಣಾ ದಂಪತಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಅಲ್ಲದೇ ವಿಚಾರಣೆಗೆ ಹಾಜರಾಗಲು ಪೊಲೀಸರು ದಂಪತಿಗೆ 24 ಗಂಟೆ ಮುಂಚಿತವಾಗಿ ನೋಟೀಸ್ ನೀಡಬೇಕು ಎಂದು ಕೋರ್ಟ್ ಸೂಚಿಸಿದೆ ಎಂದು ರಾಣಾ ದಂಪತಿ ಪರ ವಕೀಲ ರಿಜ್ವಾನ್ ತಿಳಿಸಿದ್ದಾರೆ.