ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಕೆ.ಎಸ್. ಈಶ್ವರಪ್ಪ ಕೊನೆಗೂ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅವರ ರೇಸ್ ಕೋರ್ಸ್ ನಿವಾಸದಲ್ಲಿ ಭೇಟಿಯಾದ ಈಶ್ವರಪ್ಪ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದು, ಇದನ್ನು ಸ್ವೀಕರಿಸಿರುವ ಮುಖ್ಯಮಂತ್ರಿಗಳು ಅಂಗೀಕಾರಕ್ಕಾಗಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಇದರ ಮಧ್ಯೆ ಈಶ್ವರಪ್ಪ ಬೆಂಬಲಿಗರು ರಾಜೀನಾಮೆ ನೀಡದಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ನಮ್ಮ ನಾಯಕರು ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿ ಅವರು ರಾಜೀನಾಮೆ ನೀಡುವುದು ಬೇಡ ಎಂಬ ಘೋಷಣೆ ಕೂಗಿದ್ದಾರೆ.