alex Certify BIG BREAKING: ಸತತ 3ನೇ ದಿನವೂ 8000 ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿಯೂ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸತತ 3ನೇ ದಿನವೂ 8000 ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿಯೂ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಿದ್ದು, ಕಳೆದ ಮೂರು ದಿನಗಳಿಂದ ಪ್ರತಿ ದಿನ 8000 ಕ್ಕೂ ಅಧಿಕ ಕೇಸ್ ಗಳು ದಾಖಲಾಗುತ್ತಿವೆ. ಕಳೆದ 24 ಗಂಟೆಯಲ್ಲಿ 8,084 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಇನ್ನು ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 10 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,771 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 47,995 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 4,592 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,26,57,335 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 11,77,146 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,95,19,81,150 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 2,49,418 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...