alex Certify BIG BREAKING: ಸತತ 5ನೇ ದಿನವೂ 1ಲಕ್ಷದ 68 ಸಾವಿರಕ್ಕೂ ಅಧಿಕ ಜನರಲ್ಲಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿಯೂ ಮತ್ತಷ್ಟು ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸತತ 5ನೇ ದಿನವೂ 1ಲಕ್ಷದ 68 ಸಾವಿರಕ್ಕೂ ಅಧಿಕ ಜನರಲ್ಲಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿಯೂ ಮತ್ತಷ್ಟು ಏರಿಕೆ

ನವದೆಹಲಿ: ದೇಶದಲ್ಲಿ ರೂಪಾಂತರಿ ವೈರಸ್ ನಡುವೆ ಕೊರೊನಾ ಸೋಂಕು ಸ್ಫೋಟಗೊಳ್ಳುತ್ತಿದ್ದು ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರುತ್ತಿದೆ. ಕಳೆದ 24 ಗಂಟೆಯಲ್ಲಿ 1,68,063 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಮತ್ತೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 277 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 484213ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 821446 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 69959 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34570131 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 15,79,928 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 92,07,700 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,52,89,70,294 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...