alex Certify BIG BREAKING: ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಬರ್ಬರ ಹತ್ಯೆ

ಸರಳವಾಸ್ತು ಖ್ಯಾತಿಯ ಖ್ಯಾತ ಜ್ಯೋತಿಷಿ ಚಂದ್ರಶೇಖರ್ ಗುರೂಜಿಯವರನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ಉಣಕಲ್ ಕ್ರಾಸ್ ಬಳಿಯ ಖಾಸಗಿ ಹೋಟೆಲ್ ನ ರಿಸೆಪ್ಶನ್ ನಲ್ಲಿಯೇ ಚಂದ್ರಶೇಖರ್ ಗುರೂಜಿಯವರನ್ನು ಕೊಲೆ ಮಾಡಲಾಗಿದೆ. ಹೋಟೆಲ್ ಗೆ ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದು ಚಂದ್ರಶೇಖರ್ ಗುರೂಜಿಯವರನ್ನು ಹತ್ಯೆಗೈದಿದ್ದಾನೆ ಎಂದು ತಿಳಿದುಬಂದಿದೆ.

ಇಂದು ಬೆಳಿಗ್ಗೆ ಮುಂಬೈನಿಂದ ಹುಬ್ಬಳ್ಳಿ ತಮ್ಮ ನಿವಾಸಕ್ಕೆ ಆಗಮಿಸಿದ್ದ ಚಂದ್ರಶೇಖರ್ ಗುರೂಜಿ ಬಳಿಕ ಉಣಕಲ್ ಬಳಿಯ ಹೋಟೆಲ್ ಗೆ ತೆರಳಿದ್ದರು. ಈ ವೇಳೆ ಹೋಟೆಲ್ ರಿಸೆಪ್ಶನ್ ಗೆ ಬರುತ್ತಿದ್ದಂತೆ ಏಕಾಏಕಿ ಬಂದ ದುಷ್ಕರ್ಮಿ ಗುರೂಜಿ ಮೇಲೆ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಗುರೂಜಿ ಹೋಟೆಲ್ ಗೆ ಬರುವುದರ ಬಗ್ಗೆ ಮೊದಲೇ ಮಾಹಿತಿ ಪಡೆದೇ ದುಷ್ಕರ್ಮಿ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಚಂದ್ರಶೇಖರ್ ಗುರೂಜಿ ಹತ್ಯೆಗೆ ಕಾರಣವೇನು ಎಂಬುದು ತನಿಖೆಯಿಂದಷ್ಟೇ ತಿಳಿಯಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...