ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಸ್ವತಃ ಸಿಎಂ ಬೊಮ್ಮಾಯಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ನನಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.
ಅಲ್ಲದೇ ತಮಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ದೆಹಲಿಯ ಪ್ರವಾಸ ರದ್ದಾಗಿದೆ ಎಂದು ತಿಳಿಸಿದ್ದಾರೆ.