alex Certify BIG BREAKING: ಸಿಎಂ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ; ಸೂಕ್ತ ಚಿಕಿತ್ಸೆ ಪಡೆಯುವಂತೆ ಸಲಹೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸಿಎಂ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ; ಸೂಕ್ತ ಚಿಕಿತ್ಸೆ ಪಡೆಯುವಂತೆ ಸಲಹೆ

ಬೆಂಗಳೂರು: ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಸಿಎಂ ಆರೋಗ್ಯ ವಿಚಾರಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ಸಂಜೆ 4:30ಕ್ಕೆ ದೂರವಾಣಿ ಕರೆ ಮಾಡಿದ ಪ್ರಧಾನಿ ಮೋದಿ, ಸೂಕ್ತ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದ್ದಾರೆ. ಸುಮಾರು ಐದು ನಿಮಿಷಗಳ ಕಾಲ ಮಾತುಕತೆ ನಡೆಸಿದ ಪ್ರಧಾನಿ, ರಾಜ್ಯದಲ್ಲಿನ ಕೋವಿಡ್ ಸ್ಥಿತಿ ಗತಿ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ.

ತಮಗೆ ಕೋವಿಡ್ ತಗಲಿರುವ ಬಗ್ಗೆ ವಿವರಣೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ತಮ್ಮ ಜೊತೆಗೆ ಕುಟುಂಬದ ಇಬ್ಬರು ಸದಸ್ಯರಿಗೂ ಸೋಂಕು ತಗುಲಿದೆ ಎಂದಿದ್ದಾರೆ. ಈ ವೇಳೆ ಎಲ್ಲರೂ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳಿ ಎಂದು ಪ್ರಧಾನಿ ಸಲಹೆ ನೀಡಿದ್ದಾರೆ.

ಇನ್ನು ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆಯೂ ಪ್ರಧಾನಿಗಳಿಗೆ ಮಾಹಿತಿ ನೀಡಿದ ಸಿಎಂ, ಇದೀಗ ಬೆಂಗಳೂರಿನಲ್ಲಿ ವರ್ಚುವಲ್ ಆಗಿ ಸಭೆ ನಡೆಸುತ್ತಿದ್ದೇನೆ. ಜನವರಿ 13ರಂದು ಸಂಜೆ ತಾವು ಕರೆದಿರುವ ಕೋವಿಡ್ ವರ್ಚುಯಲ್ ಸಭೆಗೆ ಪೂರ್ವಭಾವಿ ರೂಪದಲ್ಲಿ ಈ ಸಭೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಲಸಿಕೆ ಅಭಿಯಾನವನ್ನು ತೀವ್ರಗೊಳಿ ಸಲಾಗಿದೆ. ತಜ್ಞರು ನೀಡುವ ಸಲಹೆಗಳನ್ನು ಆಧರಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ವಿವರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...