ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಕಾರಣವಾಗಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾವಣೆ ನಿಟ್ಟಿನಲ್ಲಿ ಪ್ರಯತ್ನ ನಡೆದಿದ್ದು, ಸಿಎಂ ಸ್ಥಾನಕ್ಕಾಗಿ ನಾಲ್ವರು ಸಚಿವರ ಹೆಸರು ಕೇಳಿಬಂದಿದೆ.
ಸಿಎಂ ಯಡಿಯೂರಪ್ಪ ಬದಲಾವಣೆ ಬಹುತೇಕ ಖಚಿತ ಎಂದು ಹೇಳಲಾಗುತ್ತಿದ್ದು, ಮುಂದಿನ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಈಗಾಗಲೇ ನಾಲ್ವರು ನಾಯಕರ ಹೆಸರು ಮುನ್ನೆಲೆಗೆ ಬಂದಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಹುಬ್ಬಳ್ಳಿ – ಧಾರವಾಡ ಪಶ್ಚಿಮ ಶಾಸಕ ಅರವಿಂದ್ ಬೆಲ್ಲದ್, ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಹೆಸರು ಕೇಳಿಬಂದಿದೆ.
BIG NEWS: ಅಧಿಕಾರ ಹೋದ್ರೆ ಗೂಟ ಹೂಯ್ತು ಅಂದುಕೊಳ್ತೀನಿ; ನಳಿನ್ ವಿರುದ್ಧ ಸಚಿವ ಈಶ್ವರಪ್ಪ ಅಸಮಾಧಾನ
ಸಿಎಂ ಬದಲಾವಣೆ ವದಂತಿ ಬೆನ್ನಲ್ಲೇ ವಲಸಿಗ ಸಚಿವರಿಗೂ ತಳಮಳ ಶುರುವಾಗಿದ್ದು, ಮುಖ್ಯಮಂತ್ರಿ ಬದಲಾವಣೆಯಾದರೇ ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಯಲಿದ್ದು, ಹಲವರಿಗೆ ಸಚಿವ ಸ್ಥಾನ ಕಳೆದುಕೊಳ್ಳುವ ಭೀತಿ ಎದುರಾಗಿದೆ.