alex Certify BIG BREAKING: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೊಮ್ಮಾಯಿ; ಬೆಂಗಳೂರಿನತ್ತ ಪಯಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೊಮ್ಮಾಯಿ; ಬೆಂಗಳೂರಿನತ್ತ ಪಯಣ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಹೀನಾಯ ಸೋಲು ಅನುಭವಿಸಿದ್ದು, ಕಾಂಗ್ರೆಸ್ ಭರ್ಜರಿ ಗೆಲುವಿನ ನಗೆ ಬೀರಿದೆ. ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಲು ಕಾಂಗ್ರೆಸ್ ಸಜ್ಜಾಗಿದ್ದು, ಈಗಾಗಲೇ ಪೂರಕ ಸಿದ್ಧತೆಗಳು ನಡೆಯುತ್ತಿವೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸಿದ್ದು, ಇದೀಗ ಕಾಂಗ್ರೆಸ್ ಗೆ ಬಹುಮತ ಲಭಿಸಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಹಾವೇರಿಯಿಂದ ಬೆಂಗಳೂರಿಗೆ ತೆರಳಲು ಸಿದ್ದರಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...