ಬೆಂಗಳೂರು: ಏಕಾಏಕಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ವ್ಯಕ್ತಿಯೋರ್ವ ಸಜೀವ ದಹನಗೊಂಡಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಎಂ.ಎಂ.ಫುಡ್ ಫ್ಯಾಕ್ಟರಿಯಲ್ಲಿ ನಡೆದಿದೆ.
ಮಾಗಡಿ ರಸ್ತೆಯಲ್ಲಿನ ಎಂ.ಎಂ.ಫುಡ್ ಫ್ಯಾಕ್ಟರಿಯಲ್ಲಿ ಈ ದುರಂತ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿ ಸಜೀವ ದಹನಗೊಂಡಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ.
ಸಿಲಿಂಡರ್ ಸ್ಫೋಟದಿಂದಾಗಿ ಫ್ಯಾಕ್ಟರಿಗೆ ಬೆಂಕಿ ಆವರಿಸಿಕೊಂಡಿದ್ದು, 3 ಅಗ್ನಿಶಾಮಕ ವಾಹನ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದೆ.