ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್ ಡಿ.ವೈ. ಚಂದ್ರಚೂಡ್ ನೇಮಕಗೊಂಡಿದ್ದಾರೆ.
ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಈ ವಿಷಯ ತಿಳಿಸಿದ್ದು, ನವೆಂಬರ್ 9ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಲಿದ್ದಾರೆ.
ಹಾಲಿ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ಅವರ ಅಧಿಕಾರಾವಧಿ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ, ಅವರು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು.