
ಇನ್ನು ದೇಶದಲ್ಲಿ 16,21,603 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,81,109 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 3,95,11,307 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ 57,42,659 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,67,29,42,707 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 17,42,793 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.