alex Certify BIG BREAKING: ಹಳ್ಳ ದಾಟಲು ಹೋಗಿ ನೀರಿನಲ್ಲಿ ಕೊಚ್ಚಿ ಹೋದ ಬಾಲಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಹಳ್ಳ ದಾಟಲು ಹೋಗಿ ನೀರಿನಲ್ಲಿ ಕೊಚ್ಚಿ ಹೋದ ಬಾಲಕಿ

ಬೆಳಗಾವಿ: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದ್ದು, ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ನಡುವೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ದುರಂತವೊಂದು ಸಂಭವಿಸಿದೆ.

ಹಳ್ಳ ದಾಟುತ್ತಿದ್ದ ವೇಳೆ ಬಾಲಕಿಯೊಬ್ಬಳು ಜಾರಿಬಿದ್ದು, ನೀರು ಪಾಲಾಗಿರುವ ಘಟನೆ ಚಿಕ್ಕೋಡಿ ತಾಲೂಕಿನ ರಾಮನಗರ ಕಾಲೋನಿಯಲ್ಲಿ ನಡೆದಿದೆ.

ಬಸ್ ನಿಲ್ದಾಣದಿಂದ ತಾಯಿಯ ಜೊತೆ ಮನೆಗೆ ವಾಪಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ರಾಮನಗರ ಕಾಲೋನಿ ಬಳಿ ಹಳ್ಳ ತುಂಬಿ ಹರಿಯುತ್ತಿತ್ತು, ಹಳ್ಳ ದಾಟಲು ಹೋಗಿ ಬಾಲಕಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾಳೆ. ಎಸ್.ಡಿ.ಆರ್.ಎಫ್ ತಂಡದಿಂದ ಬಾಲಕಿಗಾಗಿ ಶೋಧಕಾರ್ಯ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...