ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಾಡಹಗಲೇ ಭೀಕರ ಹಲ್ಲೆ ನಡೆದಿದ್ದು, ಹಳೆ ವೈಷಮ್ಯಕ್ಕೆ ಈ ಕೃತ್ಯ ನಡೆದಿದೆ ಎಂದು ಹೇಳಲಾಗಿದೆ.
ಶೇಷಾದ್ರಿಪುರಂ ಬಳಿಯ ನಟರಾಜ ಥಿಯೇಟರ್ ಬಳಿ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಆಟೋದಲ್ಲಿ ಬಂದ ನಾಲ್ವರು ಗಣೇಶ್ ಎಂಬವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.
ತೀವ್ರವಾಗಿ ಗಾಯಗೊಂಡಿರುವ ಗಣೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಾಡಹಗಲೇ ನಡೆದ ಈ ಘಟನೆಯಿಂದ ಜನತೆ ಬೆಚ್ಚಿಬಿದ್ದಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.