ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತ್ರಿಸದಸ್ಯ ಪೀಠ ಮತ್ತೆ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.
ಹಿಜಾಬ್ ಕುರಿತ ಅರ್ಜಿ ವಿಚಾರಣೆ ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ನಡೆಯುತ್ತಿದ್ದು, ಇಂದು ಸರ್ಕಾರದ ಪರ ಎಜಿ ಪ್ರಭುಲಿಂಗ ನಾವದಗಿ ಪ್ರತಿವಾದ ಮಂಡಿಸಿದ್ದಾರೆ.
ಪ್ರತಿವಾದ ಆಲಿಸಿದ ಹೈಕೋರ್ಟ್ ತ್ರಿಸದಸ್ಯ ಪೀಠ, ಅರ್ಜಿ ವಿಚಾರಣೆಯನ್ನು ಸೋಮವಾರ ಮಧ್ಯಾಹ್ನ 2:30ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮುಂದಿನ ಆದೇಶದವರೆಗೂ ಸಮವಸ್ತ್ರ ಕಡ್ಡಾಯ ಎಂಬ ಹೈಕೋರ್ಟ್ ಮಧ್ಯಂತರ ಆದೇಶ ಪಾಲನೆ ಮುಂದುವರೆಸಬೇಕಾಗಿದೆ.