ಬೆಂಗಳೂರು: ಹಿಜಾಬ್ ಧರಿಸಲು ಅವಕಾಶಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ತ್ರಿಸದಸ್ಯಪೀಠದಲ್ಲಿ ಮುಂದುವರೆದಿದ್ದು, ಕೆಲವೇ ದಿನಗಳಲ್ಲಿ ತೀರ್ಪು ನೀಡುತ್ತೇವೆ. ಆದರೆ ಇದೀಗ ಮಧ್ಯಂತರ ಆದೇಶ ನೀಡುವುದಾಗಿ ಹೈಕೋರ್ಟ್ ಸಿಜೆ ಅಭಿಪ್ರಾಯ ಪಟ್ಟಿದ್ದಾರೆ.
ಅರ್ಜಿ ವಿಚಾರಣೆ ಮುಗಿಯುವವರೆಗೂ ಯಾವುದೇ ಧಾರ್ಮಿಕ ಗುರುತು ಬಳಸಬಾರದು. ಹಿಜಾಬ್, ಶಾಲುಗಳನ್ನು ಧರಿಸಿ ಶಾಲಾ-ಕಾಲೇಜುಗಳಿಗೆ ಹೋಗುವಂತಿಲ್ಲ ಎಂದು ಮಧ್ಯಂತರ ಆದೇಶ ನೀಡಿರುವ ಹೈಕೋರ್ಟ್ ಸಿಜೆ, ರಾಜ್ಯದಲ್ಲಿ ಶಾಂತಿ, ನೆಮ್ಮದಿ ಮರಳಬೇಕಿದೆ ಎಂದು ತಿಳಿಸಿದ್ದಾರೆ.
ಅರ್ಜಿ ವಿಚಾರಣೆ ಸೋಮವಾರ ಮಧ್ಯಾಹ್ನ 2:30ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ.