ಬೆಂಗಳೂರು: ಇಡೀ ರಾಜ್ಯವೆ ತೀರ್ಪಿಗಾಗಿ ಎದುರು ನೋಡುತ್ತಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ಹೈಕೋರ್ಟ್ ತ್ರಿಸದಸ್ಯ ಪೀಠದಲ್ಲಿ ಆರಂಭವಾಗಿದೆ.
ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ಆರಂಭವಾಗಿದೆ. ಈ ವೇಳೆ ವಕೀಲ ರಮತ್ ಉಲ್ಲಾ ಕೊತ್ವಾಲ್ ಸಲ್ಲಿಸಿದ ಹಿಜಾಬ್ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ಮೆಹಂದಿ ಕಾರ್ಯಕ್ರಮಕ್ಕೆ ತಯಾರಾಗಿದ್ದ ವದುವನ್ನ ನೋಡಿ ಆಶ್ಚರ್ಯಗೊಂಡ ವರ: ವಿಡಿಯೋ ವೈರಲ್…!
ಪಿಐಎಲ್ ನಲ್ಲಿ ಯಾರ ಪರ ವಾದ ಮಂಡನೆ ಮಾಡುತ್ತೀರಾ ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖಿಸಿಲ್ಲ. ಅಲ್ಲದೇ ಅರ್ಜಿ ಸಲ್ಲಿಸುವ ವೇಳೆ ಪಿಐಎಲ್ 18, 14ರ ನಿಯಮ ಪಾಲನೆ ಮಾಡಿಲ್ಲ. ಹಾಗಾಗಿ ನ್ಯಾಯಾಲಯ ನಿಮ್ಮ ಅರ್ಜಿ ಪರಿಗಣಿಸಲ್ಲ ಎಂದು ನ್ಯಾ.ಕೃಷ್ಣ ದೀಕ್ಷಿತ್ ವಕೀಲ ರಹಮತ್ ಉಲ್ಲಾ ಅವರಿಗೆ ತಿಳಿಸಿದ್ದಾರೆ. ಈ ಮೂಲಕ ಹಿಜಾಬ್ ಕುರಿತ ರಹಮತ್ ಉಲ್ಲಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿನ್ನು ಹೈಕೋರ್ಟ್ ವಜಾಗೊಳಿಸಿದೆ.