BIG BREAKING: ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಹಿರಿಯ ನಟ ದಿಲೀಪ್ ಕುಮಾರ್ ಇನ್ನಿಲ್ಲ 07-07-2021 7:50AM IST / No Comments / Posted In: Latest News, Live News, Entertainment ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ 98 ವರ್ಷದ ದಿಲೀಪ್ ಕುಮಾರ್ ಅವರನ್ನು ಎರಡು ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪಾಕಿಸ್ತಾನದ ಪೇಶಾವರದಲ್ಲಿ ಡಿಸೆಂಬರ್ 11, 1922 ರಲ್ಲಿ ಜನಿಸಿದ್ದ ಮಹಮ್ಮದ್ ಯೂಸೂಫ್ ಖಾನ್ ವಿಭಜನೆ ವೇಳೆ ಭಾರತಕ್ಕೆ ಬಂದಿದ್ದು ಬಾಲಿವುಡ್ ಚಿತ್ರರಂಗದಲ್ಲಿ ತಮ್ಮನ್ನು ಗುರುತಿಸಿಕೊಂಡ ಬಳಿಕ ದಿಲೀಪ್ ಕುಮಾರ್ ಎಂಬ ಹೆಸರಿನಿಂದಲೇ ಖ್ಯಾತರಾಗಿದ್ದರು. ಪತ್ನಿ ಸಾಯಿರಾಬಾನು ಜೊತೆ ಮುಂಬೈನಲ್ಲಿ ನೆಲೆಸಿದ್ದ ದಿಲೀಪ್ ಕುಮಾರ್ ಇಂದು ಬಾರದ ಲೋಕಕ್ಕೆ ತೆರಳಿದ್ದಾರೆ. ಹಿರಿಯ ನಟನ ನಿಧನಕ್ಕೆ ಬಾಲಿವುಡ್ ಚಿತ್ರರಂಗ ಕಂಬನಿ ಮಿಡಿದಿದೆ. ಮುಂಬೈನ ಹಿಂದೂಜಾ ಆಸ್ಪತ್ರೆಯಲ್ಲಿ ದಿಲೀಪ್ ಕುಮಾರ್ ಅವರನ್ನು ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ 7-30 ರ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ. Terrible start to the day – badshah of cinema Dilip kumar passes away .. RIP — pallavi ghosh (@_pallavighosh) July 7, 2021