alex Certify BIG BREAKING: ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಹಿರಿಯ ನಟ ದಿಲೀಪ್‌ ಕುಮಾರ್‌ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಹಿರಿಯ ನಟ ದಿಲೀಪ್‌ ಕುಮಾರ್‌ ಇನ್ನಿಲ್ಲ

ಬಾಲಿವುಡ್‌ ಹಿರಿಯ ನಟ ದಿಲೀಪ್‌ ಕುಮಾರ್‌ ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ 98 ವರ್ಷದ ದಿಲೀಪ್‌ ಕುಮಾರ್‌ ಅವರನ್ನು ಎರಡು ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪಾಕಿಸ್ತಾನದ ಪೇಶಾವರದಲ್ಲಿ ಡಿಸೆಂಬರ್‌ 11, 1922 ರಲ್ಲಿ ಜನಿಸಿದ್ದ ಮಹಮ್ಮದ್‌ ಯೂಸೂಫ್‌ ಖಾನ್‌ ವಿಭಜನೆ ವೇಳೆ ಭಾರತಕ್ಕೆ ಬಂದಿದ್ದು ಬಾಲಿವುಡ್‌ ಚಿತ್ರರಂಗದಲ್ಲಿ ತಮ್ಮನ್ನು ಗುರುತಿಸಿಕೊಂಡ ಬಳಿಕ ದಿಲೀಪ್‌ ಕುಮಾರ್‌ ಎಂಬ ಹೆಸರಿನಿಂದಲೇ ಖ್ಯಾತರಾಗಿದ್ದರು.

ಪತ್ನಿ ಸಾಯಿರಾಬಾನು ಜೊತೆ ಮುಂಬೈನಲ್ಲಿ ನೆಲೆಸಿದ್ದ ದಿಲೀಪ್‌ ಕುಮಾರ್‌ ಇಂದು ಬಾರದ ಲೋಕಕ್ಕೆ ತೆರಳಿದ್ದಾರೆ. ಹಿರಿಯ ನಟನ ನಿಧನಕ್ಕೆ ಬಾಲಿವುಡ್‌ ಚಿತ್ರರಂಗ ಕಂಬನಿ ಮಿಡಿದಿದೆ.

ಮುಂಬೈನ ಹಿಂದೂಜಾ ಆಸ್ಪತ್ರೆಯಲ್ಲಿ ದಿಲೀಪ್‌ ಕುಮಾರ್‌ ಅವರನ್ನು ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ 7-30 ರ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...