alex Certify BIG BREAKING: ಹುಬ್ಬಳ್ಳಿ ಗಲಭೆ ಕೇಸ್; ಮಾಸ್ಟರ್ ಮೈಂಡ್ ವಸೀಂ ಪಠಾಣ್ ಪೊಲೀಸರ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಹುಬ್ಬಳ್ಳಿ ಗಲಭೆ ಕೇಸ್; ಮಾಸ್ಟರ್ ಮೈಂಡ್ ವಸೀಂ ಪಠಾಣ್ ಪೊಲೀಸರ ವಶಕ್ಕೆ

ಹುಬ್ಬಳ್ಳಿ; ಹಳೆ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದ ಮಾಸ್ಟರ್ ಮೈಂಡ್ ಎಂದೇ ಹೇಳಲಾಗುತ್ತಿರುವ ಮೌಲ್ವಿ ವಸೀಂ ಪಠಾಣ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೆಲ ಸಮಯದ ಹಿಂದೆ ಅಜ್ಞಾತ ಸ್ಥಳದಿಂದ 4 ನಿಮಿಷಗಳ ವಿಡಿಯೋ ಬಿಡುಗಡೆ ಮಾಡಿದ್ದ ವಸೀಂ ಪಠಾಣ್, ಹುಬ್ಬಳ್ಳಿ ಗಲಭೆಗೆ ನಾನು ಕಾರಣ ಅಲ್ಲ, ನನ್ನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯ ಆರೋಪ ಮಾಡಲಾಗುತ್ತಿದೆ. ನನ್ನ ಜೀವಕ್ಕೆ ಅಪಾಯವಿದ್ದು, ವಾತಾವರಣ ತಿಳಿಯಾದ ಬಳಿಕ ತಾನೇ ಬಂದು ಪೊಲೀಸರ ಮುಂದೆ ಹೇಳಿಕೆ ಕೊಡುವುದಾಗಿ ಹೇಳಿದ್ದ. ವಿಡಿಯೋ ಬಿಡುಗಡೆ ಬೆನ್ನಲ್ಲೇ ಪೊಲೀಸರು ವಸಿಂ ಪಠಾಣ್ ಹುಡುಕಾಟ ತೀವ್ರಗೊಳಿಸಿದ್ದರು.

ವಿಡಿಯೋ ಬಿಡುಗಡೆ ಮಾಡಿದ್ದ ಕೇವಲ 4 ಗಂಟೆಯಲ್ಲೇ ಹಳೆ ಹುಬ್ಬಳ್ಳಿ ಪೊಲೀಸರು ಇದೀಗ ಆರೋಪಿ ವಸಿಂ ಪಠಾಣ್ ನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...