alex Certify BIG BREAKING: ಹೆಚ್ಚಿದ ಕೊರೊನಾ 3ನೇ ಅಲೆ ಆತಂಕ; ಸೋಂಕಿತರ ಸಂಖ್ಯೆಯಲ್ಲಿ ದಿಡೀರ್ ಏರಿಕೆ; ಒಂದೇ ದಿನದಲ್ಲಿ ಮಹಾಮಾರಿಗೆ 607 ಜನ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಹೆಚ್ಚಿದ ಕೊರೊನಾ 3ನೇ ಅಲೆ ಆತಂಕ; ಸೋಂಕಿತರ ಸಂಖ್ಯೆಯಲ್ಲಿ ದಿಡೀರ್ ಏರಿಕೆ; ಒಂದೇ ದಿನದಲ್ಲಿ ಮಹಾಮಾರಿಗೆ 607 ಜನ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏಕಾಏಕಿ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 46,164 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,25,58,530ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯೂ ಹೆಚ್ಚಿದ್ದು, ಕಳೆದ 24 ಗಂಟೆಯಲ್ಲಿ 607 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 436365 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 333725 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 34159 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 31788440 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 17,87,283 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 80,40,407 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 60,38,46,475 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...