ನವದೆಹಲಿ: ತಮಿಳುನಾಡಿನಲ್ಲಿ ಹೆಲಿಕಾಪ್ಟರ್ ಪತನವಾಗಿ ಭಾರತೀಯ ಸೇನಾ ಪಡೆಗಳ ಮುಖ್ಯಸ್ಥ ಜ. ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ಹಾಗೂ 11 ಮಂದಿ ಸಾವು ಕಂಡಿದ್ದಾರೆ.
ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ಸೇರಿ 13 ಮಂದಿ ಮೃತಪಟ್ಟಿದ್ದಾರೆ. ವೆಲ್ಲಿಂಗ್ಟನ್ ಸೇನಾ ಆಸ್ಪತ್ರೆಯಲ್ಲಿ ಜನರಲ್ ಬಿಪಿನ್ ರಾವತ್ ಕೊನೆಯುಸಿರೆಳೆದಿದ್ದಾರೆ ಎಂದು ಭಾರತೀಯ ವಾಯುಪಡೆಯಿಂದ ಟ್ವೀಟ್ ಮಾಡಲಾಗಿದೆ.