alex Certify BIG BREAKING: ಹೊಸ ವರ್ಷದ ಸಂಭ್ರಮದ ನಡುವೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆ; ದೇಶದಲ್ಲಿ ಹೆಚ್ಚುತ್ತಿದೆ ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಹೊಸ ವರ್ಷದ ಸಂಭ್ರಮದ ನಡುವೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆ; ದೇಶದಲ್ಲಿ ಹೆಚ್ಚುತ್ತಿದೆ ಆತಂಕ

ನವದೆಹಲಿ: ರೂಪಾಂತರಿ ವೈರಸ್ ನಡುವೆಯೇ ದೇಶದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 16,764 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 220 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 481080 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 91361 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 7585 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34266363 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 12,50,837 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 66,65,290 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,44,54,16,714 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...