alex Certify BIG BREAKING: 1ರಿಂದ 5ನೇ ತರಗತಿ ಶಾಲೆ ಆರಂಭ; ಸರ್ಕಾರದಿಂದ ಗೈಡ್ ಲೈನ್ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 1ರಿಂದ 5ನೇ ತರಗತಿ ಶಾಲೆ ಆರಂಭ; ಸರ್ಕಾರದಿಂದ ಗೈಡ್ ಲೈನ್ ಪ್ರಕಟ

ಬೆಂಗಳೂರು: 1-ರಿಂದ 5ನೇ ತರಗತಿವರೆಗಿನ ಶಾಲೆ ಪುನರಾರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಮಾರ್ಗಸೂಚಿ ಕೂಡ ಪ್ರಕಟವಾಗಿದೆ.

ಅಕ್ಟೋಬರ್ 25ರಿಂದ 1-5ನೇ ತರಗತಿವರೆಗೆ ಶಾಲೆಗಳನ್ನು ಆರಂಭಿಸಲು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ಮಾರ್ಗಸೂಚಿ ಅನ್ವಯ ಅ.25ರಿಂದ ಪ್ರಾಥಮಿಕ ಶಾಲೆಗಳನ್ನು ತೆರೆಯಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಮಾರ್ಗಸೂಚಿ:

ಶಾಲೆಗಳಿಗೆ ಮಕ್ಕಳನ್ನು ಕಳುಹಿಸಲು ಪೋಷಕರ ಅನುಮತಿ ಕಡ್ಡಾಯ

ತರಗತಿಯಲ್ಲಿ ಶೇ.50ರಷ್ಟು ಮಾತ್ರ ವಿದ್ಯಾರ್ಥಿಗಳಿರಬೇಕು

ಒಂದು ಮಿಟರ್ ದೈಹಿಕ ಅಂತರ ಪಾಲನೆ

ಶಿಕ್ಷಕರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...