alex Certify BIG BREAKING: 100 ಪ್ರತಿಶತ ಕೊರೊನಾ ಲಸಿಕೆ ಸಾಧನೆ ಮಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 100 ಪ್ರತಿಶತ ಕೊರೊನಾ ಲಸಿಕೆ ಸಾಧನೆ ಮಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲೆ

ಎಲ್ಲಾ ಅರ್ಹ ಫಲಾನುಭವಿಗಳಿಗೆ 100 ಪ್ರತಿಶತ ಕೊರೊನಾ ಲಸಿಕೆಯನ್ನು ನೀಡಿದ ಕರ್ನಾಟಕದ ಮೊದಲ ಜಿಲ್ಲೆ ಎಂಬ ಕೀರ್ತಿಗೆ ಬೆಂಗಳೂರು ಗ್ರಾಮಾಂತರ ಪಾತ್ರವಾಗಿದೆ. ರಾಜ್ಯ ಸರ್ಕಾರವು ನೀಡಿರುವ ಮಾಹಿತಿಯ ಪ್ರಕಾರ ಕೊರೊನಾ ಲಸಿಕೆಗೆ ಅರ್ಹರಿರುವ ಪ್ರತಿಯೊಬ್ಬರೂ 2 ಡೋಸ್​ ಕೊರೊನಾ ಲಸಿಕೆಯನ್ನು ಸ್ವೀಕರಿಸಿದ್ದಾರೆ ಎನ್ನಲಾಗಿದೆ.

ಈ ವಿಶೇಷ ಸಾಧನೆಯನ್ನು ಮಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ವೈದ್ಯಕೀಯ ಸಿಬ್ಬಂದಿಗೆ ಹಾಗೂ ಜಿಲ್ಲಾಡಳಿತದ ಸಿಬ್ಬಂದಿಗೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್​ ಅಭಿನಂದನೆ ಸಲ್ಲಿಸಿದ್ದಾರೆ.

ಇದರ ಜೊತೆಯಲ್ಲಿ ರಾಜ್ಯದಲ್ಲಿ ಇನ್ನೂ 11 ಜಿಲ್ಲೆಗಳು ಈ ಗುರಿಯನ್ನು ತಲುಪಲು ಇನ್ನೇನು ಕೆಲವೇ ಕೆಲವು ಹೆಜ್ಜೆ ದೂರದಲ್ಲಿವೆ ಎನ್ನಲಾಗಿದೆ. ಈಗಾಗಲೇ ಈ 11 ಜಿಲ್ಲೆಗಳು 90 ಪ್ರತಿಶತಕ್ಕೂ ಅಧಿಕ ಕೊರೊನಾ ಲಸಿಕೆಯ ಡಬಲ್​ ಡೋಸ್​ನ್ನು ಜನತೆಗೆ ನೀಡಿವೆ.

ಈ ನಡುವೆ ಬೆಂಗಳೂರು ಗ್ರಾಮಾಂತರವು ಕೊರೊನಾ ಲಸಿಕೆಯ ವಿಚಾರದಲ್ಲಿ ರಾಜ್ಯಕ್ಕೆ ದೊಡ್ಡ ಕೊಡುಗೆಯನ್ನೇ ನೀಡಿದೆ. ಭಾನುವಾರದಂದು ಬೆಂಗಳೂರು ಗ್ರಾಮಾಂತರದಲ್ಲಿ 11,938 ಕೊರೊನಾ ಪ್ರಕರಣಗಳು ಹಾಗೂ 14 ಕೊರೊನಾ ಸಾವುಗಳು ವರದಿಯಾಗಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...