ಮುಂಬೈ : ಥಾಣೆಯಲ್ಲಿ ಸಮೃದ್ಧಿ ಎಕ್ಸ್ಪ್ರೆಸ್ ಹೆದ್ದಾರಿಯ ಮೂರನೇ ಹಂತದ ನಿರ್ಮಾಣದಲ್ಲಿ ಬಳಸಲಾದ ಗರ್ಡರ್ ಲಾಂಚರ್ ಯಂತ್ರ ಕುಸಿದು ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.
ಇಂದು ಮುಂಜಾನೆ ಈ ಅಪಘಡ ಸಂಭವಿಸಿದೆ.ಥಾಣೆಯ ಸರ್ಲಾಂಬೆ ಗ್ರಾಮದ ಬಳಿ ಸೇತುವೆ ನಿರ್ಮಾಣ ನಡೆಯುತ್ತಿದ್ದಾಗ ಅಪಘಾತ ಸಂಭವಿಸಿದೆ. ಮೃತರಲ್ಲದೆ, ಇನ್ನೂ ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಗರ್ಡರ್ ಯಂತ್ರವನ್ನು ಸಂಪರ್ಕಿಸುವ ಕ್ರೇನ್ ಮತ್ತು ಸ್ಲ್ಯಾಬ್ 100 ಅಡಿ ಎತ್ತರದಿಂದ ಬಿದ್ದು ದೊಡ್ಡ ಅಪಘಾತ ಸಂಭವಿಸಿದೆ. ಮೃತ ದೇಹಗಳನ್ನು ಹಾಗೂ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.
ಪೊಲೀಸ್ ಸಿಬ್ಬಂದಿ, ಎನ್ಡಿಆರ್ಎಫ್ ಸಿಬ್ಬಂದಿ ಮತ್ತು ಅಗ್ನಿಶಾಮಕ ಅಧಿಕಾರಿಗಳು ರಕ್ಷಣಾ ಮತ್ತು ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಆತಂಕ ವ್ಯಕ್ತಪಡಿಸಲಾಗಿದೆ.
https://twitter.com/ANI/status/1686181516999827456?ref_src=twsrc%5Etfw%7Ctwcamp%5Etweetembed%7Ctwterm%5E1686181516999827456%7Ctwgr%5E12fdf8abbc310f1ebed87725cc0194a30435d1ab%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fhindi%2Flivehindustan-epaper-dhad36e67a5f114c7f968321aab9b70edf%2Flpgprice100rupayesastahuaasilendarchekkarenairetlist-newsid-n523844402