alex Certify BIG BREAKING: 16308 ಕೋವಿಡ್ ಸಕ್ರಿಯ ಪ್ರಕರಣ ದಾಖಲು; ಸಾವಿನ ಸಂಖ್ಯೆಯಲ್ಲಿಯೂ ದಿಢೀರ್ ಏರಿಕೆ; 24 ಗಂಟೆಯಲ್ಲಿ ಹೊಸದಾಗಿ ಪತ್ತೆಯಾದ ಕೊರೊನಾ ಸೋಂಕಿತರ ಸಂಖ್ಯೆ ಎಷ್ಟು….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 16308 ಕೋವಿಡ್ ಸಕ್ರಿಯ ಪ್ರಕರಣ ದಾಖಲು; ಸಾವಿನ ಸಂಖ್ಯೆಯಲ್ಲಿಯೂ ದಿಢೀರ್ ಏರಿಕೆ; 24 ಗಂಟೆಯಲ್ಲಿ ಹೊಸದಾಗಿ ಪತ್ತೆಯಾದ ಕೊರೊನಾ ಸೋಂಕಿತರ ಸಂಖ್ಯೆ ಎಷ್ಟು….?

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 2,685 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆ ದಿಢೀರ್ ಏರಿಕೆಯಾಗಿದ್ದು, 24 ಗಂಟೆಯಲ್ಲಿ 33 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 524572 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 16308 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2158 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42609335 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 14,39,466 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,93,13,41,918 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,47,637 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...