2002 ರ ಗುಜರಾತ್ ಗಲಭೆ ಕುರಿತಂತೆ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತಿತರರಿಗೆ ವಿಶೇಷ ತನಿಖಾ ತಂಡ ಕ್ಲೀನ್ ಚಿಟ್ ನೀಡಿತ್ತು.
ಇದನ್ನು ಪ್ರಶ್ನಿಸಿ ಕಾಂಗ್ರೆಸ್ ಸಂಸದರಾಗಿದ್ದ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಕಿಯಾ ಜಾಫ್ರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಈ ಅರ್ಜಿಯನ್ನು ಈಗ ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಇದರಿಂದಾಗಿ ವಿಶೇಷ ತನಿಖಾ ತಂಡದ ಕ್ರಮವನ್ನು ಸುಪ್ರೀಂ ಎತ್ತಿ ಹಿಡಿದಂತಾಗಿದೆ.