ಬೆಂಗಳೂರು: 2023ರ ಸಾರ್ವತ್ರಿಕ ಚುನಾವಣೆಗೆ ಕಮಲ ಪಾಳಯ ಭರ್ಜರಿ ಸಿದ್ಧತೆ ನಡೆಸಿದ್ದು, ತೆರೆಮರೆಯಲ್ಲಿ ರಾಜಕೀಯ ಲೆಕ್ಕಾಚಾರಗಳು ಆರಂಭವಾಗಿವೆ. ಇದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬದಲಾವಣೆ ಕುರಿತು ಚರ್ಚೆ ನಡೆದಿದೆ.
ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಳಿನ್ ಕುಮಾರ್ ಕಟೀಲ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬದಲಾವಣೆ ಮಾಡುವ ನಿಟ್ಟಿನಲ್ಲಿ ಬಿಜೆಪಿಯಲ್ಲಿ ಚರ್ಚೆ ನಡೆದಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಂದಾಯ ಸಚಿವ ಆರ್. ಅಶೋಕ್ ಹೆಸರು ಕೇಳಿಬರುತ್ತಿದೆ.
ಒಕ್ಕಲಿಗ ಸಮುದಾಯದ ಆರ್. ಅಶೋಕ್ ಅವರಿಗೆ ಜವಾಬ್ದಾರಿ ನೀಡಿದರೆ ಪಕ್ಷ ಸಂಘಟನೆಯಲ್ಲಿನ ಅಸಮಾಧಾನಗಳು ಸರಿ ಹೋಗಲಿವೆ ಎಂಬ ಅಭಿಪ್ರಾಯ ಕೇಳಿಬಂದಿದೆ. ಒಂದು ವೇಳೆ ರಾಜ್ಯಾಧ್ಯಕ್ಷ ಸ್ಥಾನದಿಂದ ಕಟೀಲ್ ಅವರನ್ನು ಬದಲಾವಣೆ ಮಾಡಿದರೆ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.