ನವದೆಹಲಿ: ದೇಶದಲ್ಲಿ ಕೊರೊನಾ 4ನೇ ಅಲೆ ಆತಂಕದ ನಡುವೆ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 3,805 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 22 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,024 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 20,303 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 3,168 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,25,54,416 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ
ನಿನ್ನೆ 17,49,063 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,90,00,94,982 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,87,544 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.