alex Certify BIG BREAKING: 24 ಗಂಟೆಯಲ್ಲಿ ಕೋವಿಡ್ ಸಾವಿನ ಸಂಖ್ಯೆಯಲ್ಲಿ ಭಾರಿ ಇಳಿಕೆ; 41,383 ಹೊಸ ಸೋಂಕಿತರು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 24 ಗಂಟೆಯಲ್ಲಿ ಕೋವಿಡ್ ಸಾವಿನ ಸಂಖ್ಯೆಯಲ್ಲಿ ಭಾರಿ ಇಳಿಕೆ; 41,383 ಹೊಸ ಸೋಂಕಿತರು ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 41,383 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,12,57,720ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 507 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಮೊನ್ನೆ 3,998 ಜನರು ಸೋಂಕಿನಿಂದ ಮೃತಪಟ್ಟಿದ್ದರು. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,18,987ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,09,394 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 38,652 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 3,04,29,339 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ 17,18,439 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ಕಳೆದ 24ಗಂಟೆಯಲ್ಲಿ 22,77,679 ಜನರಿಗೆ ವ್ಯಾಕ್ಸಿನ್ ಹಾಕಲಾಗಿದೆ. ದೇಶದಲ್ಲಿ ಈವರೆಗೆ 41,78,51,151 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...