ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳವಾಗಿದೆ. ಕಳೆದ 24 ಗಂಟೆಯಲ್ಲಿ 43,654 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ಕಳೆದ 24 ಗಂಟೆಯಲ್ಲಿ 640 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 422022 ಕ್ಕೆ ಏರಿಕೆಯಾಗಿದೆ.
SHOCKING: ಪಕ್ಕದ ಮನೆಯಲ್ಲೇ ಇದ್ದ ಮೆಕ್ಕೆಜೋಳದ ಹೊಲದಲ್ಲಿ ಘೋರ ಕೃತ್ಯವೆಸಗಿದ್ದ ಕಿರಾತಕ
ಇನ್ನು ದೇಶದಲ್ಲಿ 399436 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 41678 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 30663147 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ ದೇಶದಲ್ಲಿ 17,36,857 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ. 24 ಗಂಟೆಯಲ್ಲಿ 40,02,358 ಜನರಿಗೆ ಲಸಿಕೆ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 44,61,56,659 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.