alex Certify BIG BREAKING: 24 ಗಂಟೆಯಲ್ಲಿ ಮತ್ತಷ್ಟು ಏರಿಕೆಯಾಯ್ತು ಕೊರೊನಾ ಸೋಂಕಿತರ ಸಂಖ್ಯೆ; ಸಾವಿನ ಸಂಖ್ಯೆಯಲ್ಲಿ ಕೊಂಚ ಕುಸಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 24 ಗಂಟೆಯಲ್ಲಿ ಮತ್ತಷ್ಟು ಏರಿಕೆಯಾಯ್ತು ಕೊರೊನಾ ಸೋಂಕಿತರ ಸಂಖ್ಯೆ; ಸಾವಿನ ಸಂಖ್ಯೆಯಲ್ಲಿ ಕೊಂಚ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 2,527 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 33 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,22,149 ಕ್ಕೆ ಏರಿಕೆಯಾಗಿದೆ.

ದುಷ್ಟ ಶಕ್ತಿಗೆ ಹೆದರಿ ಮನೆಯಲ್ಲೇ ಲಾಕ್‌ ಆದ ಗ್ರಾಮಸ್ಥರು….!

ಇನ್ನು ದೇಶದಲ್ಲಿ 15,079 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1,656 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,25,17,724 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 1,87,46,72,536 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 19,13,296 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,55,179 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...