alex Certify BIG BREAKING: 24 ಗಂಟೆಯಲ್ಲಿ ಮತ್ತೆ ಸಾವಿರಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿ ಕುಸಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 24 ಗಂಟೆಯಲ್ಲಿ ಮತ್ತೆ ಸಾವಿರಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿ ಕುಸಿತ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಮತ್ತೆ ಸಾವಿರಕ್ಕೂ ಅಧಿಕ ಕೋವಿಡ್ ಕೇಸ್ ಗಳು ದಾಖಲಾಗಿದ್ದು, 1,033 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 43 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,21,530 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 11,639 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1,222 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,24,98,789 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 15,37,314 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,85,20,72,469 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,82,039 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...