alex Certify BIG BREAKING: 24 ಗಂಟೆಯಲ್ಲಿ ಮತ್ತೆ 12,800 ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; 63 ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳು ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 24 ಗಂಟೆಯಲ್ಲಿ ಮತ್ತೆ 12,800 ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; 63 ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳು ದಾಖಲು

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ನಾಲ್ಕನೆ ಅಲೆ ಆತಂಕ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ 12,847 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು ಒಂದೇ ದಿನದಲ್ಲಿ 14 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,817ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 63,063 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 7,985 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,26,74,712 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 15,27,365 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,95,84,03,471 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 5,19,903 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...