
ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 56 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,25,660 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1,40,760 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 18,301 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,30,63,651 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 22,93,627 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,99,71,61,438 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,17,895 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.