alex Certify BIG BREAKING: 24 ಗಂಟೆಯಲ್ಲಿ ಮತ್ತೆ 20,408 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆ; ಸಾವಿನ ಸಂಖ್ಯೆಯಲ್ಲಿಯೂ ದಿಢೀರ್ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 24 ಗಂಟೆಯಲ್ಲಿ ಮತ್ತೆ 20,408 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆ; ಸಾವಿನ ಸಂಖ್ಯೆಯಲ್ಲಿಯೂ ದಿಢೀರ್ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 20,408 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದ್ದು, 24 ಗಂಟೆಯಲ್ಲಿ 54 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,312ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,43,384 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.48ರಷ್ಟು ಜನಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,33,30,442 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 33,87,173 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,03,94,33,480 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,04,399 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

— ANI (@ANI) July 30, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...