alex Certify BIG BREAKING: 24 ಗಂಟೆಯಲ್ಲಿ ಮತ್ತೆ 36,571 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; ಕೋವಿಡ್ ಸಾವಿನ ಸಂಖ್ಯೆಯಲ್ಲೂ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 24 ಗಂಟೆಯಲ್ಲಿ ಮತ್ತೆ 36,571 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; ಕೋವಿಡ್ ಸಾವಿನ ಸಂಖ್ಯೆಯಲ್ಲೂ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 36,571 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 540 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 433589ಕ್ಕೆ ಏರಿಕೆಯಾಗಿದೆ.

ಲಸಿಕೆ ಪಡೆದವರಿಗೂ ಕೊರೊನಾ….! ಇದರ ಹಿಂದಿನ ಕಾರಣ ಬಿಚ್ಚಿಟ್ಟಿದೆ ಅಧ್ಯಯನ

ಇನ್ನು ದೇಶದಲ್ಲಿ 363605 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 36555 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 31561635 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್ ರಿಕವರಿ ರೇಟ್ 97.54%ಕ್ಕೆ ಏರಿಕೆಯಾಗಿದೆ.

ನಿನ್ನೆ ದೇಶದಲ್ಲಿ 18,86,271 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 54,71,282 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 57,22,81,488 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...