alex Certify BIG BREAKING: 24 ಗಂಟೆಯಲ್ಲಿ ಮತ್ತೆ 41,831 ಜನರಲ್ಲಿ ಕೊರೊನಾ ಸೋಂಕು ದೃಢ; ಕೊಂಚ ಇಳಿಕೆ ಕಂಡ ಸಾವಿನ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 24 ಗಂಟೆಯಲ್ಲಿ ಮತ್ತೆ 41,831 ಜನರಲ್ಲಿ ಕೊರೊನಾ ಸೋಂಕು ದೃಢ; ಕೊಂಚ ಇಳಿಕೆ ಕಂಡ ಸಾವಿನ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 41,831 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ 541 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 424351 ಕ್ಕೆ ಏರಿಕೆಯಾಗಿದೆ.

ಮನೆಯ ಈ ಭಾಗದಲ್ಲಿರಲಿ ʼಮನಿ ಪ್ಲಾಂಟ್ʼ

ಇನ್ನು ದೇಶದಲ್ಲಿ 410952 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ರಿಕವರಿ ರೇಟ್ 97.36%ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ 39258 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 30820521 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 17,89,472 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ. 24ಗಂಟೆಯಲ್ಲಿ 60,15,842 ಜನರಿಗೆ ಲಸಿಕೆ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 47,02,98,596 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...