ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳವಾಗಿದೆ. ಕಳೆದ 24 ಗಂಟೆಯಲ್ಲಿ 43,509 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚುತ್ತಲೇ ಇದೆ.
ಕಳೆದ 24 ಗಂಟೆಯಲ್ಲಿ 640 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 422662ಕ್ಕೆ ಏರಿಕೆಯಾಗಿದೆ.
ಏರ್ಟೆಲ್ ಗ್ರಾಹಕರಿಗೆ ಶಾಕ್, ಉಳಿದ ಕಂಪನಿ ಗ್ರಾಹಕರಿಗೂ ತಟ್ಟಲಿದೆ ಬಿಸಿ…?
ಇನ್ನು ದೇಶದಲ್ಲಿ 403840 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ರಿಕವರಿ ರೇಟ್ 97.38%ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ 38465 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 30701612 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ ದೇಶದಲ್ಲಿ 17,28,795 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ. 24ಗಂಟೆಯಲ್ಲಿ 43,92,697 ಜನರಿಗೆ ಲಸಿಕೆ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 45,07,06,257 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.