alex Certify BIG BREAKING: 24 ಗಂಟೆಯಲ್ಲಿ 5 ಸಾವಿರಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 24 ಗಂಟೆಯಲ್ಲಿ 5 ಸಾವಿರಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 5,476 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಕುಸಿತವಾಗಿದ್ದು, 24 ಗಂಟೆಯಲ್ಲಿ ಮತ್ತೆ 158 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 514878 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 59442 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 9754 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42388475 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 26,19,778 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,78,83,79,249 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 9,09,985 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...