ನವದೆಹಲಿ: ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿದ್ದು, ದಿನದಿಂದ ದಿನಕ್ಕೆ ಆತಂಕವನ್ನುಂಟು ಮಾಡಿದೆ. ಈ ನಡುವೆ ಕಳೆದ 24 ಗಂಟೆಯಲ್ಲಿ ಮತ್ತೆ 7,774 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಸಾವಿನ ಸಂಖ್ಯೆ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 306 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 475434 ಕ್ಕೆ ಏರಿಕೆಯಾಗಿದೆ.
BREAKING NEWS: ಹಿರಿಯ ನಟ ದ್ವಾರಕೀಶ್ ಗೆ ಸಾಲದ ಹಣ ವಾಪಸ್ ನೀಡಲು ಸೂಚನೆ
ಇನ್ನು ದೇಶದಲ್ಲಿ 92281 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 8464 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34122795 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ ದೇಶದಲ್ಲಿ 11,89,459 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 89,56,784 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,32,93,84,230 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.