alex Certify BIG BREAKING: 24 ಗಂಟೆಯಲ್ಲಿ ಮತ್ತೆ 9,119 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ಒಂದೇ ದಿನದಲ್ಲಿ 396 ಜನ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 24 ಗಂಟೆಯಲ್ಲಿ ಮತ್ತೆ 9,119 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ಒಂದೇ ದಿನದಲ್ಲಿ 396 ಜನ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 9,119 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಇನ್ನು ಸಾವಿನ ಸಂಖ್ಯೆಯಲ್ಲಿಯೂ ಭಾರಿ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 396 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 466980ಕ್ಕೆ ಏರಿಕೆಯಾಗಿದೆ.

BREAKING: ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಇಂದು ವಿಚಾರಣೆಗೆ ಹಾಜರು

ಇನ್ನು ದೇಶದಲ್ಲಿ 109940 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 10264 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33967962 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 11,50,538 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 90,27,638 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,19,38,44,741 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...