alex Certify BIG BREAKING: 24 ಗಂಟೆಯಲ್ಲಿ 1,233 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 24 ಗಂಟೆಯಲ್ಲಿ 1,233 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 1,233 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 31 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 521101ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 14704 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1876 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42487410 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 26,34,080 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,83,82,41,743 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 6,24,022 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...