alex Certify BIG BREAKING: 2nd PUC ಫಲಿತಾಂಶ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 2nd PUC ಫಲಿತಾಂಶ ಪ್ರಕಟ

ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಲಾಗಿದ್ದು, ಯಾವುದೆ ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ಫಲಿತಾಂಶ ಪ್ರಕಟಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಮೊದಲ ಬಾರಿಗೆ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಲಾಗಿದ್ದು, ಎಸ್.ಎಸ್.ಎಲ್.ಸಿ ಹಾಗೂ ಪ್ರಥಮ ಪಿಯು ಹಾಗೂ ಆಂತರಿಕ ಅಂಕಗಳನ್ನು ಮೌಲ್ಯಾಂಕನ ಮಾಡಿ ಫಲಿತಾಂಶ ನೀಡಲಾಗಿದೆ. ಈ ಫಲಿತಾಂಶದ ಬಗ್ಗೆ ವಿದ್ಯಾರ್ಥಿಗಳಿಗೆ ತೃಪ್ತಿ ಇಲ್ಲದಿದ್ದರೆ ಆಗಸ್ಟ್ ನಲ್ಲಿ ಪರೀಕ್ಷೆಗಳನ್ನು ಬರೆಯಬಹುದಾಗಿದೆ ಎಂದರು.

ಒಟ್ಟು 6,66,499ವಿದ್ಯಾರ್ಥಿಗಳು ಪಾಸ್ ಆಗಿದ್ದು, 4,57,706 ವಿದ್ಯಾರ್ಥಿಗಳು ಡಿಸ್ಟಿಂಗ್ ಶನ್ ಹಾಗೂ ಫಸ್ಟ್ ಕ್ಲಾಸ್ ನಲ್ಲಿ ತೇರ್ಗಡೆಯಾಗಿದ್ದರೆ, 1,47,055 ವಿದ್ಯಾರ್ಥಿಗಳು ಸೆಕೆಂಡ್ ಕ್ಲಾಸ್ ನಲ್ಲಿ ತೇರ್ಗಡೆಯಾಗಿದ್ದಾರೆ. ಅವರಲ್ಲಿ 1,95,650 ಹುಡುಗರು ಹಾಗೂ 2,52,056 ವಿದ್ಯಾರ್ಥಿನಿಯರು ಮತ್ತು 76,344 ರಿಪಿಟರ್ಸ್ ಇದ್ದಾರೆ ಎಂದು ಹೇಳಿದರು. ಶಿಕ್ಷಣ ಇಲಾಖೆಯ ವೆಬ್ ಸೈಟ್ www.pue.kar.nic.in ನಲ್ಲಿ ಫಲಿತಾಂಶ ಲಭ್ಯವಿದೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...