ನವದೆಹಲಿ: ದೂರ ಸಂಪರ್ಕ ಕ್ಷೇತ್ರದಲ್ಲಿ ಮಹತ್ತರ ಕ್ರಾಂತ್ರಿ ಮಾಡಿರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ 5G ಮೊಬೈಲ್ ಸೇವೆ ಆರಂಭಿಸಲು ನಿರ್ಧರಿಸಿದೆ.
ಈ ಕುರಿತು ಕೇಂದ್ರ ಬಜೆಟ್ ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದು, 5G ತರಂಗಾಂತರ ಹರಾಜು ಪ್ರಕ್ರಿಯೆ ನಡೆದಿದ್ದು, ದೇಶದಲ್ಲಿ 5G ಮೊಬೈಲ್ ಸೇವೆ ಆರಂಭಿಸಲಾಗುವುದು. ಈ ಮೂಲಕ ಟೆಲಿಕಾಂ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಲಾಗಿದೆ ಎಂದರು.
ದೇಶದಲ್ಲಿ 2022ರಿಂದಲೇ 5G ಮೊಬೈಲ್ ಸೇವೆ ಆರಂಭಗೊಳ್ಳಲಿದೆ. ಪ್ರತಿ ಹಳ್ಳಿಗೂ ಆಪ್ಟಿಕಲ್ ಫೈಬರ್ ಕೇಬಲ್ ಸೌಕರ್ಯ ಕಲ್ಪಿಸಲಾಗುವುದು ಎಂದು ತಿಳಿಸಿದರು.